ಮಹಿಳಾ ಮೀಸಲು ವಿಧೇಯಕ ವಿರೋಧ ಖಂಡನೆ ; ಬಾಗಲಕೋಟೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲು ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿದ್ದನ್ನು ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತೆಯರು ಕಾಂಗ್ರೆಸ್ ವಿರುದ್ಧ ಘೋಷ
ಪ್ರತಿಭಟನೆ


ಬಾಗಲಕೋಟೆ, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಹಿಳಾ ಮೀಸಲು ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿದ್ದನ್ನು ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತೆಯರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ, ಮಹಿಳಾ ಸಬಲೀಕರಣಕ್ಕೆ ಅಡ್ಡಿಯಾಗುವ ನಿಲುವು ತಳೆದಿರುವುದಾಗಿ ಆರೋಪಿಸಿದರು.

ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ತರಲಾದ ಈ ವಿಧೇಯಕಕ್ಕೆ ಬೆಂಬಲ ನೀಡಬೇಕು ಎಂದು ಅವರು ಆಗ್ರಹಿಸಿದರು.

ಮಹಿಳಾ ಮೀಸಲು ವಿಧೇಯಕವು ದೇಶದ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಪ್ರತಿನಿಧಿತ್ವ ಒದಗಿಸಲು ಸಹಾಯಕವಾಗಲಿದೆ ಎಂದು ಹೇಳಿದ ಪ್ರತಿಭಟನಾಕಾರರು, ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಹಲವು ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande