
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಖಾಡದಲ್ಲಿ ಕಾಂಗ್ರೆಸ್ ಪರವಾದ ಜನಾಭಿಪ್ರಾಯ ದಿನದಿಂದ ದಿನಕ್ಕೆ ಬಲ ಪಡೆಯುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ಯೂನಿಯನ್ ಆಫ್ ಮರ್ಚಂಟ್ಸ್ ಅಂಡ್ ಎಂಟರಪ್ರೈನರ್ಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆಯನ್ನು ಸಚಿವ ಎಂ ಬಿ ಪಾಟೀಲ್ ನಡೆಸಿದರು.
ಈ ವೇಳೆ ವ್ಯಾಪಾರಸ್ಥರು ಮತ್ತು ಉದ್ಯಮಿಗಳ ಪ್ರಮುಖ ಸಂಘಟನೆಯ ಸದಸ್ಯರಿಗೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಸಂಪೂರ್ಣ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು.
ಸಂಘದ ಪದಾಧಿಕಾರಿಗಳು ಉತ್ತಮ ಸ್ಪಂದನೆ ನೀಡಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಜನಾಭಿಪ್ರಾಯ ಬಲವಾಗುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಮುಖಂಡರು ತಿಳಿಸಿದ್ದಾರೆ.
ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸುವ ವೇಳೆ ಮತದಾರರಲ್ಲಿ ಕಂಡು ಬರುತ್ತಿರುವ ಉತ್ಸಾಹ ಹಾಗೂ ಜನಮನದಲ್ಲಿ ವ್ಯಕ್ತವಾಗುತ್ತಿರುವ ಬೆಂಬಲದ ಹಿನ್ನೆಲೆಯಲ್ಲಿ ಅಭ್ಯರ್ಥಿ ಉಮೇಶ್ ಮೇಟಿ ಅವರ ಗೆಲುವು ಖಚಿತ ಎಂಬ ವಿಶ್ವಾಸ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮತ್ತಷ್ಟು ಬಲಗೊಂಡಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರವಿ ಕುಮಟಗಿ, ಉಪಾಧ್ಯಕ್ಷ ರಾಮ್ ಮುಂದಡಾ, ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಿ ಅಮೃತ್ಕರ್, ಮಾಜಿ ಎಂಎಲ್ಸಿ ಎಂ.ಪಿ. ನಾಡಗೌಡ, ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande