
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಪಕ್ಷ ಅಡ್ಡದಾರಿ ಹಿಡಿದಿದೆ ಎಂದು ಬಾಗಲಕೋಟೆ ಜಿಲ್ಲಾ ಬಿಜೆಪಿ ನಾಯಕರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಮಹಿಳೆಯೊಬ್ಬರನ್ನು ಬೆದರಿಸಿ ಬಿಜೆಪಿ ವಿರುದ್ಧ ಹೇಳಿಕೆ ನೀಡುವಂತೆ ಪ್ರಚೋದಿಸಿ, ಸ್ಕ್ರಿಪ್ಟೆಡ್ ಸಂಭಾಷಣೆಯನ್ನು ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಹಿಳೆ ಸ್ವತಃ ಸ್ಪಷ್ಟನೆ ನೀಡಿದ್ದು, ತನ್ನ ಪುತ್ರ ಜೈಲಿನಲ್ಲಿರುವ ವಿಚಾರದಲ್ಲಿ ಬಿಜೆಪಿ ನಾಯಕರು ಕಾಳಜಿ ವಹಿಸಿದ್ದರು. ಆದರೆ ಕಾಂಗ್ರೆಸ್ ನಾಯಕರು ಬಂದು ಬಲವಂತವಾಗಿ ಸುಳ್ಳು ಹೇಳಿಸಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
ಸರ್ಕಾರದ ಹಲವು ನಾಯಕರು ಬಾಗಲಕೋಟೆಯಲ್ಲಿ ಪ್ರಚಾರ ನಡೆಸುತ್ತಿದ್ದರೂ ಕಾಂಗ್ರೆಸ್ ಸುಳ್ಳು ಹೇಳುವ ಪರಿಸ್ಥಿತಿಗೆ ಬಂದಿದೆ. ಇದು ಸೋಲಿನ ಭೀತಿಯಿಂದಾಗಿಯೇ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande