ಕೊಪ್ಪಳ ವಿಕಲಚೇತನರ ಕಲ್ಯಾಣ ಕಚೇರಿ ಸ್ಥಳಾಂತರ
ಕೊಪ್ಪಳ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ಕಚೇರಿಯು ಮೊದಲು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ಕೊಪ್ಪಳದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಪ್ರಸ್ತುತ ಇಲಾಖೆಯ ಕಚೇರಿಯನ್ನು ಸ್ಥಳಾಂತರಿಸಲಾಗಿದೆ. ವಿಕ
ಕೊಪ್ಪಳ ವಿಕಲಚೇತನರ ಕಲ್ಯಾಣ ಕಚೇರಿ ಸ್ಥಳಾಂತರ


ಕೊಪ್ಪಳ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ಕಚೇರಿಯು ಮೊದಲು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ಕೊಪ್ಪಳದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಪ್ರಸ್ತುತ ಇಲಾಖೆಯ ಕಚೇರಿಯನ್ನು ಸ್ಥಳಾಂತರಿಸಲಾಗಿದೆ.

ವಿಕಲಚೇತನರ ಹಿತ ದೃಷ್ಟಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕೊಪ್ಪಳ ಕಚೇರಿಯನ್ನು ಕೊಪ್ಪಳ ನಗರಸಭೆ ವ್ಯಾಪ್ತಿಯ ಕೊಪ್ಪಳ ನಗರದ ಸರ್ಕಾರಿ ನೌಕರರ ಸಂಘದ ಕಟ್ಟಡ, ಫಿರ್ದೋಸ ನಗರದ ಗೋವಿಂದರಾಯ (ಈಶ್ವರ) ಗುಡಿ ಹಿಂದೆ, ಎಂ.ಬಿ ನಂಬರ್ 09-03-285 ಗೆ ಸ್ಥಳಾಂತರಿಸಲಾಗಿದೆ. ಈ ವಿಳಾಸದಲ್ಲಿ ಏಪ್ರಿಲ್ 6 ರಿಂದಕಚೇರಿಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ.

ಆದ್ದರಿಂದ ವಿಕಲಚೇತನರು, ವಿಕಲಚೇತನರ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಇನ್ನು ಮುಂದೆ ಈ ಇಲಾಖೆಗೆ ಸಂಬಂಧಿಸಿದಂತೆ ಪತ್ರ ವ್ಯವಹಾರಗಳಿಗಾಗಿ ಹೊಸ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande