ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಘಟಕದಿಂದ ಪೊಲೀಸ್ ಧ್ವಜ ದಿನಾಚರಣೆ
ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಘಟಕದಿಂದ ಪೊಲೀಸ್ ಧ್ವಜ ದಿನಾಚರಣೆ
ಕೆಜಿಎಫ್ನ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಎಎಸ್ಐ ಮಂಜುನಾಥ, ಎಸ್ಪಿ ಶಿವಾಂಶು ರಜಪೂತ್ ಪೋಲಿಸ್ ಧ್ವಜ ಬಿಡುಗಡೆ ಮಾಡಿದರು.


ಕೋಲಾರ ೦೨ ಏಪ್ರಿಲ್ (ಹಿ.ಸ) :

ಆ್ಯಂಕರ್ : ಕೆಜಿಎಫ್ನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಗುರುವಾರದಂದು ನಡೆದ ಪೊಲೀಸ್ ಧ್ವಜ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾತನಾಡಿ ೧೯೬೫ರ ಇಸವಿ ಏಪ್ರಿಲ್ ೨ ರಂದು ಕರ್ನಾಟಕ ಪೊಲೀಸ್ ಕಾಯ್ದೆಯು ಜಾರಿಗೆ ಬಂದಿದೆ. ಅಂದಿನಿAದ ಪೊಲೀಸ್ ಧ್ವಜ ದಿನಾಚರಣೆಯನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಆಚರಿಸುತ್ತಿದೆ. ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಲಭ್ಯಗಳೊಂದಿಗೆ ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸುತ್ತಿದೆ.

೨೦೨೫ನೇ ಸಾಲಿನಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ ಅದರಿಂದ ಸಂಗ್ರಹಿಸಿದ ರೂ.೨೧,೨೫೦೦೦/- ಹಣವನ್ನು ಪೊಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡಿ ಅದರಲ್ಲಿ ೫೦% ರಷ್ಟು ಹಣವನ್ನು ಕೇಂದ್ರ ಪೊಲೀಸ್ ಕಲ್ಯಾಣ ನಿಧಿಗೆ ವರ್ಗಾಹಿಸಿ ಹಾಗೂ ಉಳಿದ ೫೦% ರಷ್ಟು ಹಣವನ್ನು ಕೆ.ಜಿ.ಎಫ್ ನಿವೃತ್ತ ಪೊಲೀಸ್ ಕಲ್ಯಾಣ ನಿಧಿಗೆ ನೀಡಿಲಾಗಿದೆ ಎಂದು ತಿಳಿಸಿದರು.

ನಿವೃತ್ತ ಎಎಸ್ಐ ಮಂಜುನಾಥ ಧ್ವಜ ವಂದನೆ ಸ್ವೀಕರಿಸಿ ಮಾತನಾಡಿ ಈ ದಿನ ನಡೆದ ಪೊಲೀಸ್ ಧ್ವಜ ದಿನಾಚಾರಣೆಯ ಕವಾಯಿತನ್ನು ಪ್ರಶಂಶಿಸಿ ಪ್ರತಿ ವರ್ಷ ಕರ್ನಾಟಕ ರಾಜ್ಯದಲ್ಲಿ ಎಪ್ರಿಲ್ ೨ ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸುತ್ತಿದೆ. ಧ್ವಜ ದಿನಾಚರಣೆಯನ್ನು ರಾಜ್ಯ ಪೊಲೀಸ್ ಪಡೆಯ ಪುನರ್ ರಚನೆ ಹಾಗೂ ೧೯೬೫ರ ಇಸವಿ ಏಪ್ರಿಲ್ ೨ ರಂದು ಕರ್ನಾಟಕ ಪೊಲೀಸ್ ಕಾಯ್ದೆಯು ಜಾರಿಗೆ ಬಂದ ನೆನಪಿಗಾಗಿ ಆಚರಿಸುತ್ತಿದೆ. ಇದೇ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಸಹ ಆಚರಿಸುತ್ತಿರುವುದಾಗಿ ತಿಳಿಸಿ ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಲು ಕೋರಿದರು.

ಇದೇ ಸಂದರ್ಭದಲ್ಲಿ ೨೦೨೫-೨೬ ನೇ ಸಾಲಿನಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಆರ್.ಪಿ.ಐ. ವಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಡಿ.ಎ.ಆರ್, ನಾಗರೀಕ ಮತ್ತು ಮಹಿಳಾ ಪೊಲೀಸ್ ತಂಡಗಳಿAದ ಆಕರ್ಷಕ ರೀತಿಯಲ್ಲಿ ಪಥಸಂಚಲನ ನಡೆಯಿತು. ಅತಿಥಿಗಳು ಪೊಲೀಸ್ ಧ್ವಜಗಳನ್ನು ಬಿಡುಗಡೆಗೊಳಿಸಿ ದೇಣಿಗೆಯನ್ನು ನೀಡಿದರು.

ಪೊಲೀಸ್ ಕಾನ್ಸ್ಟೇಬಲ್ ಶರಣು ಕವಟಗಿ ಕಾರ್ಯಕ್ರಮ ನಿರೂಪಿಸಿದರು. ಕೆಜಿಎಫ್ ಉಪ ವಿಭಾಗದ ಡಿ.ವೈ,ಎಸ್,ಪಿ ವಿ ಲಕ್ಷö್ಮಯ್ಯ ವಂದಿಸಿದರು.

ಚಿತ್ರ : ಕೆಜಿಎಫ್ನ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಎಎಸ್ಐ ಮಂಜುನಾಥ, ಎಸ್ಪಿ ಶಿವಾಂಶು ರಜಪೂತ್ ಪೋಲಿಸ್ ಧ್ವಜ ಬಿಡುಗಡೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande