
ವಿಜಯಪುರ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್, ಜಾಲವಾದ ಗ್ರಾಮದಲ್ಲಿ ದ್ರಾವಿದ ದಲಿತ ಸೇನಾ ಹಾಗೂ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಆರ್.ಇ.ಝಡ್ ಕಂಪನಿಯ ವಿರುದ್ಧ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮುಖಂಡರು ರೈತರ ಸಮಸ್ಯೆಗಳನ್ನು ಆಲಿಸಿ, ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ನಿಂಗಪ್ಪ ಬಿರಾದಾರ, ಪಿ.ಎಸ್.ಐ ಸಚೀನ್ ಆಲಮೇಲಕರ್, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರಗೌಡ ಪಾಟೀಲ (ಕೋರವಾರ), ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಗುರನಗೌಡ ಪಾಟೀಲ, ರೈತ ಮುಖಂಡರಾದ ಶಂಕರಗೌಡ ಪಾಟೀಲ, ರಾಮು ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande