ಬಾಗಲಕೋಟೆ ; ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ವಿಶೇಷ ಪೂಜೆ
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಹನುಮ ಜಯಂತಿ ಪ್ರಯುಕ್ತ ಇಂದು ಹೂವಿನಹಳ್ಳಿ ಗ್ರಾಮದ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಮೇಶ ಮೇಟಿ ಅವರು ಭವ್ಯ
ಜಯಂತಿ


ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಹನುಮ ಜಯಂತಿ ಪ್ರಯುಕ್ತ ಇಂದು ಹೂವಿನಹಳ್ಳಿ ಗ್ರಾಮದ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಮೇಶ ಮೇಟಿ ಅವರು ಭವ್ಯ ಮಾರುತೇಶ್ವರನ ಪಾದದಲ್ಲಿ ಚುನಾವಣಾ ಪ್ರಚಾರದ ಪತ್ರವನ್ನು ಅರ್ಪಿಸಿ ಆಶೀರ್ವಾದ ಕೋರಿದರು. ಬಳಿಕ ಆಂಜನೇಯ ಸ್ವಾಮಿಗಳಿಗೆ ಕರ್ಪೂರದ ಆರತಿ ಬೆಳಗಿಸಿ ಮುಂಬರುವ ಉಪಚುನಾವಣೆಯಲ್ಲಿ ಜಯ ಸಿಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande