ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಬಳ್ಳಾರಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ.ಎನ್ ಅವರು ತಿಳಿಸಿದ್ದಾರ
ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ


ಬಳ್ಳಾರಿ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ.ಎನ್ ಅವರು ತಿಳಿಸಿದ್ದಾರೆ.

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025ರ ಜನವರಿ 01 ರಿಂದ 2025ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು.

ವಿವಿಧ ಪ್ರಕಾರಗಳ ಪುಸ್ತಕಗಳು :

ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿAಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯಶಾಸ್ತç, ಸಮಾಜಶಾಸ್ತç, ಮಾನವಶಾಸ್ತç, ಮನಃಶಾಸ್ತç, ಭಾಷಾಶಾಸ್ತç, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭAಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ) ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬAಧಿಸಿದ ಸಂಶೋಧನೆ), ವೈಚಾರಿಕ/ಅಂಕಣ ಬರಹ, ಅನುವಾದ-1 (ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ /ಸೃಜನೇತರ ಕೃತಿ), ಲೇಖಕರ ಮೊದಲ ಸ್ವತಂತ್ರಕೃತಿ (2025ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರ ಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ), ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾಸ ಸಾಹಿತ್ಯ (ದಾಸ ಸಾಹಿತ್ಯ ಕುರಿತ ಸೃಜನ/ಸೃಜನೇತರ ಕೃತಿಗಳು), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ.ಶಾಂತರಸ ಗಜಲ್ ಕಾವ್ಯ ದತ್ತಿ ಬಹುಮಾನ), ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ರಚನೆಗೊಂಡ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕ.

*ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು:*

ಮರುಮುದ್ರಣವಾದ ಪುಸ್ತಕಗಳು, ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.

ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ರಿಜಿಸ್ರ್ಡ್ ಅಂಚೆ, ಕೊರಿಯರ್ ಅಥವಾ ಖುದ್ದಾಗಿ ಜೂನ್ 30 ರೊಳಗೆ ತಲುಪುವಂತೆ ಕಳುಹಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್ಸೈಟ್ www.sahithyaacademy.karnataka.gov.in ಗೆ ಭೇಟಿ ನೀಡಿ ವಿಕ್ಷೀಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande