ಬಾಗಲಕೋಟೆ : ಖೊಟ್ಟಿ ಮತದಾರರ ತನಿಖೆಗೆ ಕಾಂಗ್ರೆಸ್ ಆಗ್ರಹ
ಆಗ್ರಹ
ಕೊಟ್ಟಿ


ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಖೊಟ್ಟಿ ಮತದಾರರ ಹೆಸರುಗಳನ್ನು ಸೇರಿಸಿರುವುದು ಕಂಡು ಬಂದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿ ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದರು.

ಮತದಾನದ ದಿನ ಮತದಾರರು ನಿರ್ಭೀತಿಯಿಂದ ತಮ್ಮ ಮತ ಚಲಾಯಿಸಲು ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಕೆಪಿಸಿಸಿ ಪ್ರಚಾರ ಸಮಿತಿ ಬಾಗಲಕೋಟೆ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ ಹಾಗೂ ಮುಖಂಡರಾದ ವಿಜಯ ಮುಳೂರು, ಸುನೀಲ ಬಾಲಗಾವಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande