
ಕೊಪ್ಪಳ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಇಂದ ಗ್ರೇಡ್-1 ಗೆ ನವೀಕರಿಸಲಾದ ಹಾಗೂ ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕುಕುನೂರು ತಾಲೂಕಿನ ಮಂಗಳೂರು, ಭಾನಾಪುರ ಹಾಗೂ ಕುದರಿಮೋತಿ ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಗ್ರಾಮ-1 ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಆಯಾ ಗ್ರಾಮ ಪಂಚಾಯತಿಗಳಲ್ಲಿನ ಆಸಕ್ತರು ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸಿದಲ್ಲಿ ಏಪ್ರಿಲ್ 15 ರೊಳಗಾಗಿ https://sevasindhuservices.karnataka.gov.in/loginWindow.do ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್