
ಕೊಪ್ಪಳ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ರಸಗೊಬ್ಬರವನ್ನು ಕೆ-ಕಿಸಾನ್ ತಂತ್ರಾಂಶದ ಮುಖಾಂತರ ರೈತರ ಎಫ್.ಐ.ಡಿ ಯನ್ನು ನಮೂದಿಸಿ ಮಾರಾಟ ಮಾಡಬೇಕು ಹಾಗೂ ತಮ್ಮ ಎಲ್ಲಾ ಓ ಫಾರಂಗಳನ್ನು ನವೀಕರಣಗೊಳಿಸಿಕೊಳ್ಳಬೇಕು.
ಒಂದು ವೇಳೆ ಮಾರಾಟಗಾರರು ಓ ಫಾರಂಗಳ ನೊಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ ಹಾಗೂ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆಯನ್ನು ಅಮಾನತ್ತು ಅಥವಾ ರದ್ದು ಮಾಡಲಾಗುವುದು ಹಾಗೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್