
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಾಗಲಕೋಟೆ ನಗರದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಅಬ್ಬರದ ಭಾಷಣ ಮಾಡಿದರು.
ಸಭೆಯಲ್ಲಿ ಮಾತನಾಡಿದ ಯತ್ನಾಳ್, ಶಿವಾಜಿ ಮೆರವಣಿಗೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿಕೆ ನೀಡಿದರು. ಇದೇ ವೇಳೆ ಮುಸ್ಲಿಂ ಸಮಾಜವನ್ನು ಉಲ್ಲೇಖಿಸಿ ನೀಡಿದ ಕೆಲವು ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ.
ಈ ಭಾಷಣವು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಬಾಗಲಕೋಟೆ ನಗರದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಸಮಾಜದ ಮುಖಂಡರು ಹಾಗೂ ಹಲವರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande