
ಹುಬ್ಬಳ್ಳಿ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನವಲಗುಂದ ವಿಧಾನ ಸಭಾ ಕ್ಷೇತ್ರದ ಅಣ್ಣಿಗೇರಿ ನಗರದಲ್ಲಿ ಅಣ್ಣಿಗೇರಿ ತಾಲ್ಲೂಕು ಕೃಷಿಕ ಸಮಾಜಕ್ಕೆ ಸರ್ಕಾರದಿಂದ ಮಂಜೂರಾದ ಜಮೀನಿನಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಕಾಮಗಾರಿಯನ್ನು ಶಾಸಕ ಎನ್.ಎಚ್.ಕೋನರೆಡ್ಡಿ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕೃಷಿಕ ಸಮಾಜವು ದೇಶದ ಬೆನ್ನೆಲುಬಾದ ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಇದು ಐತಿಹಾಸಿಕ ನಿರ್ಣಯವಾಗಿದ್ದು, ಅಣ್ಣಿಗೇರಿ, ನವಲಗುಂದ ಹಾಗೂ ಹುಬ್ಬಳ್ಳಿಯಲ್ಲಿ ಒಟ್ಟು ಮೂರು ಕಡೆಗಳಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ಕೃಷಿಕ ಸಮಾಜದ ಕಟ್ಟಡಗಳನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa