ಧಾರವಾಡ ಜಿಲ್ಲೆ ಗಳಗಿ ಹುಲ್ಲಕೊಪ್ಪ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ
ಧಾರವಾಡ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಗಳಗಿ ಹುಲ್ಲಕೊಪ್ಪ ಗ್ರಾಮದಲ್ಲಿ ನಡೆದ ಜಾತ್ರೆ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಂಬಂಧಿತ ತಂಡವು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ವೇಳೆ ಗ್ರಾಮಸ್ಥರಿಗೆ ಅಕ್ಕ ಪಡೆ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ
ಜಾಗೃತಿ


ಧಾರವಾಡ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಗಳಗಿ ಹುಲ್ಲಕೊಪ್ಪ ಗ್ರಾಮದಲ್ಲಿ ನಡೆದ ಜಾತ್ರೆ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಂಬಂಧಿತ ತಂಡವು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಈ ವೇಳೆ ಗ್ರಾಮಸ್ಥರಿಗೆ ಅಕ್ಕ ಪಡೆ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ಕಳ್ಳಸಾಗಣೆ ಹಾಗೂ ಮಾನವ ಕಳ್ಳಸಾಗಣೆ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಜೊತೆಗೆ ಬಿಕ್ಷಾಟನೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲಾಯಿತು.

ಮಕ್ಕಳ ಸುರಕ್ಷತೆಗಾಗಿ ಇರುವ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ಹಾಗೂ ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಬಹುದಾದ 112 ಸಂಖ್ಯೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಅವುಗಳನ್ನು ಅಗತ್ಯ ಸಂದರ್ಭಗಳಲ್ಲಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande