
ವಿಜಯಪುರ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಮರಾಠ ಸಮಾಜದ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಶಿವ–ಬಸವ ಜಯಂತಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಗೌರವ ಅಧ್ಯಕ್ಷರಾದ ಹನುಮಂತ್ ಮಾಚಪ್ಪನವರ ಅವರು ಪೂಜೆ ನೆರವೇರಿಸಿದರು. ಈ ವೇಳೆ ಭಕ್ತರು ಶಿವಾಜಿ ಮಹಾರಾಜ ಹಾಗೂ ಬಸವಣ್ಣನವರ ಆದರ್ಶಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಉತ್ಸವದಲ್ಲಿ ಮರಾಠ ಸಮಾಜದ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande