ಬಸವ ಜಯಂತಿ ಅಂಗವಾಗಿ ವಿಜಯಪುರದಲ್ಲಿ ಭಕ್ತಿಪೂರ್ವಕ ಆಚರಣೆ
ವಿಜಯಪುರ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಇಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನಗರದ ಬಸವಣ್ಣನವರ ಪುತ್ಥಳಿಗೆ ಭಕ್ತಿಯಿಂದ ಮಾಲಾರ್ಪಣೆ ಮಾಡಿ, ಅವರ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ
ಬಸವ


ವಿಜಯಪುರ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಇಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನಗರದ ಬಸವಣ್ಣನವರ ಪುತ್ಥಳಿಗೆ ಭಕ್ತಿಯಿಂದ ಮಾಲಾರ್ಪಣೆ ಮಾಡಿ, ಅವರ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ನೂರಾರು ಬಸವಭಕ್ತರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗವಹಿಸಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಗಣ್ಯರು, ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande