ಬಸವಣ್ಣನವರ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿದೀಪ : ಈಶ್ವರ ಖಂಡ್ರೆ
ಬೀದರ್, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲಾಡಳಿತದ ವತಿಯಿಂದ ನಗರದ ಡಾ. ಚನ್ನಬಸವೇಶ್ವರ ರಂಗಮಂದಿರದಲ್ಲಿ ಆಯೋಜಿಸಲಾದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ 893ನೇ ಜಯಂತಿ ಉತ್ಸವವು ಭಕ್ತಿ, ಭಾವನೆ ಮತ್ತು ಸಾಮಾಜಿಕ ಸಂದೇಶಗಳಿಂದ ಕಂಗೊಳಿಸಿತು. ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಅವರು
ಖಂಡ್ರೆ


ಬೀದರ್, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲಾಡಳಿತದ ವತಿಯಿಂದ ನಗರದ ಡಾ. ಚನ್ನಬಸವೇಶ್ವರ ರಂಗಮಂದಿರದಲ್ಲಿ ಆಯೋಜಿಸಲಾದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ 893ನೇ ಜಯಂತಿ ಉತ್ಸವವು ಭಕ್ತಿ, ಭಾವನೆ ಮತ್ತು ಸಾಮಾಜಿಕ ಸಂದೇಶಗಳಿಂದ ಕಂಗೊಳಿಸಿತು.

ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಭಾಗವಹಿಸಿ ಮಾತನಾಡಿ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಬಸವಣ್ಣನವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮತಾವಾದಿ ಮತ್ತು ಸಮನ್ಯಾಯದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದು ಸಚಿವರು ಕರೆ ನೀಡಿದರು. ಸಮಾಜದಲ್ಲಿ ಸಮಾನತೆ ಸ್ಥಾಪನೆಗೆ ವಚನ ಸಾಹಿತ್ಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಬಸವಣ್ಣನವರ ಜೀವನ, ವಚನಗಳ ಸಂದೇಶ ಹಾಗೂ ಅವರ ಸಾಮಾಜಿಕ ಸುಧಾರಣಾ ಚಿಂತನೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande