
ಹುಬ್ಬಳ್ಳಿ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಸವ ಜಯಂತಿಯ ಅಂಗವಾಗಿ ನಗರದ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣ ಪುತ್ಥಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಬಸವಣ್ಣನವರ ಸಮಾನತೆ, ಶ್ರಮಕ್ಕೆ ಗೌರವ ಮತ್ತು ಸಾಮಾಜಿಕ ನ್ಯಾಯದ ತತ್ವಗಳು ಇಂದಿನ ಸಮಾಜ ನಿರ್ಮಾಣಕ್ಕೆ ದಿಕ್ಕು ತೋರಿಸುತ್ತಿವೆ ಎಂದು ಹೇಳಿದರು.
ಬಸವಣ್ಣನವರ ಪ್ರಸಿದ್ಧ ವಚನ “ಉಳ್ಳವರು ಶಿವಾಲಯ ಮಾಡುವರು, ನಾನೇನು ಮಾಡಲಿ ಬಡವನಯ್ಯ? ಎನ್ನ ಕಾಲೇ ಕಂಬ, ದೇಹವೇ ದೇಗುಲ” ಎಂಬುದು ಮಾನವೀಯ ಮೌಲ್ಯಗಳನ್ನು ಸಾರುತ್ತದೆ ಎಂದು ಅವರು ಸ್ಮರಿಸಿದರು. “ಕಾಯಕವೇ ಕೈಲಾಸ” ಮತ್ತು “ದಾಸೋಹ” ಎಂಬ ಸಂದೇಶಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿವೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa