
ಮೈಸೂರು, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಕಲಾ ಮಂದಿರದಲ್ಲಿ ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಿದರು.
ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ,
ರಾಷ್ಟ್ರೀಯ ಬಸವ ಪ್ರಶಸ್ತಿ ಪುರಸ್ಕೃತರಾದ
ಶ್ರೀ ಸಿದ್ದರಾಮ ಶರಣರು ಬೆಲ್ದಾಳ ಅವರು, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಶಾಸಕರಾದ ಹರೀಶ್ ಗೌಡ, ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa