ಚಿತ್ರದುರ್ಗದಲ್ಲಿ ಬಸವೇಶ್ವರರ ಜಯಂತಿ : ಭವ್ಯ ಮೆರವಣಿಗೆ
ಚಿತ್ರದುರ್ಗ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮ
ಬಸವ ಜಯಂತಿ


ಚಿತ್ರದುರ್ಗ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗ ಸಾರೋಟಿನಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ನಾದಸ್ವರ, ತ್ರಾಷ್ ವಾದ್ಯ, ಚಂಡೆ ವಾದನ, ವೀರಗಾಸೆ, ಯಕ್ಷಗಾನ, ಕಹಳೆ ನಾದ, ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು.

ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾದ ಮೆರವಣಿಗೆಯು ಆನೆಬಾಗಿಲು, ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಶ್ರೀ ನೀಲಕಂಠೇಶ್ವರ ದೇವಸ್ಥಾನದವರೆಗೂ ನಡೆಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ವೀರಶೈವ ಸಮಾಜದ ಮುಖಂಡರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande