ವಿಜಯಪುರದಲ್ಲಿ ಫಲಾನುಭವಿ ಮೀನುಗಾರರಿಗೆ ಮೀನುಗಾರಿಕಾ ಕಿಟ್ ವಿತರಣೆ
ವಿಜಯಪುರ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಫಲಾನುಭವಿ ಮೀನುಗಾರರಿಗೆ ಇಂದು ಮೀನುಗಾರಿಕಾ ಕಿಟ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ವಿತರಿಸಿ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಮಿನು


ವಿಜಯಪುರ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಫಲಾನುಭವಿ ಮೀನುಗಾರರಿಗೆ ಇಂದು ಮೀನುಗಾರಿಕಾ ಕಿಟ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ವಿತರಿಸಿ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರಯ, ಇಂತಹ ಯೋಜನೆಗಳು ಮೀನುಗಾರರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರ ಜೊತೆಗೆ ಅವರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು. ಒಂದು ಕಾಲದಲ್ಲಿ ಸಮರ್ಪಕ ನೀರಾವರಿ ಸೌಲಭ್ಯಗಳಿಲ್ಲದಿದ್ದ ಈ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿರುವ ಪರಿಣಾಮವಾಗಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಜೊತೆಗೆ ಮತ್ಸ್ಯೋದ್ಯಮವೂ ವೇಗವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಗುಣಮಟ್ಟದ ಮೀನುಗಳು ಈಗ ದೆಹಲಿ ಮತ್ತು ಹೈದ್ರಾಬಾದ್ ಮೊದಲಾದ ಮಹಾನಗರಗಳಿಗೆ ರವಾನೆಯಾಗುತ್ತಿರುವುದು ಜಿಲ್ಲೆಯ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande