
ಸವದತ್ತಿ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಪ್ರಮುಖ ಆದ್ಯತೆ ಎಂದು ಶಾಸಕ ವಿಶ್ವಾಸ ವೈದ್ಯ ಅವರು ಹೇಳಿದರು.
ಯರಗಟ್ಟಿ ಪಟ್ಟಣದ ಶ್ರೀ ಮಹಾಂತ ದುರದುಂಡೇಶ್ವರ ಮಠದ ಹತ್ತಿರ CMIDP ಯೋಜನೆಯಡಿ ಮಂಜೂರಾದ ಸುಮಾರು ₹50 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಸಮುದಾಯ ಭವನವು ಮುಂದಿನ ದಿನಗಳಲ್ಲಿ ಪಟ್ಟಣದ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉಪಯುಕ್ತವಾಗಲಿದೆ ಎಂದು ಅವರು ಹೇಳಿದರು. ಕಾಮಗಾರಿಯ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ನಿರ್ಮಿತಿ ಕೇಂದ್ರ ಬೆಳಗಾವಿ ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸಿ ಯರಗಟ್ಟಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಹಿರಿಯರು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa