ಬಸವ ಜಯಂತಿ ಅಂಗವಾಗಿ ಸಂಸತ್ ಆವರಣದಲ್ಲಿ ಬಸವೇಶ್ವರರಿಗೆ ನಮನ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಸಂಸತ್ ಭವನದ ಆವರಣದಲ್ಲಿರುವ ‘ಪ್ರೇರಣಾ ಸ್ಥಳ’ದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು
ಬಸವ ಜಯಂತಿ


ನವದೆಹಲಿ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಸಂಸತ್ ಭವನದ ಆವರಣದಲ್ಲಿರುವ ‘ಪ್ರೇರಣಾ ಸ್ಥಳ’ದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಮತ್ತು ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರೂ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಜಗದ ಬೆಳಕು, ಯುಗದ ಬೆಳಕಾದ ಬಸವಣ್ಣನವರಿಗೆ ನಮನ ಸಲ್ಲಿಸಿರುವುದು ಸಂತೋಷ ತಂದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಪರಮಪೂಜ್ಯರು, ಅನೇಕ ಶರಣರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಬಸವಾನುಯಾಯಿಗಳು ಉಪಸ್ಥಿತರಿದ್ದು, ಬಸವೇಶ್ವರರ ತತ್ವಗಳು ಮತ್ತು ಸಮಾನತೆಯ ಸಂದೇಶವನ್ನು ಸ್ಮರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande