ರಾಜ್ಯಕ್ಕೆ 2ನೇ ಸ್ಥಾನ : ಜಮಖಂಡಿಯ ವಿದ್ಯಾರ್ಥಿ ಅಯಾನ್ ನಧಾಫ ಸಾಧನೆ
ಬಾಗಲಕೋಟೆ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಲಾ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದ ಜಮಖಂಡಿಯ ಬಿ.ಎಲ್.ಡಿ.ಇ. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೊಹಮ್ಮದ್ ಅಯಾನ್ ನಧಾಫ ಅವರು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದಲ್ಲಿ 2ನೇ ಸ್
ಶುಭಾಶಯ


ಬಾಗಲಕೋಟೆ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಲಾ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದ ಜಮಖಂಡಿಯ ಬಿ.ಎಲ್.ಡಿ.ಇ. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೊಹಮ್ಮದ್ ಅಯಾನ್ ನಧಾಫ ಅವರು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಗಳಿಸಿರುವ ಅಯಾನ್ ನಧಾಫ ಅವರಿಗೆ ಕಾಲೇಜಿನಲ್ಲಿ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಬಳಗದಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಯ ಸಾಧನೆಯನ್ನು ಮೆಚ್ಚಿಕೊಂಡು, ಮುಂದಿನ ಭವಿಷ್ಯ ಮತ್ತಷ್ಟು ಉಜ್ವಲವಾಗಿರಲಿ ಎಂದು ಶುಭಾಶಯ ಕೋರಲಾಯಿತು.

ಅವರ ಸಾಧನೆಯಿಂದ ಬಾಗಲಕೋಟೆ ಜಿಲ್ಲೆಗೆ ಗೌರವ ಹೆಚ್ಚಿದಂತಾಗಿದೆ. ವಿದ್ಯಾರ್ಥಿಯ ಪರಿಶ್ರಮ, ಗುರುಗಳ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲವೇ ಈ ಯಶಸ್ಸಿನ ಹಿಂದೆ ಇದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande