
ದಾವಣಗೆರೆ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಸವ ಜಯಂತಿ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕಾರ್ಯಕ್ರಮದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭಾಗವಹಿಸಿ ನೂತನ ವಧು-ವರರಿಗೆ ಶುಭಹಾರೈಸಿದರು. ಸಮಾಜಮುಖಿ ಈ ರೀತಿಯ ಸಾಮೂಹಿಕ ವಿವಾಹಗಳು ಆರ್ಥಿಕ ಭಾರವನ್ನು ಕಡಿಮೆ ಮಾಡಿ ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಇದೇ ವೇಳೆ ಶ್ರೀ ಬಸವಗುರುಕಿರಣ ಪ್ರಶಸ್ತಿ ಹಾಗೂ ಕೋಲಶಾಂತೇಶ್ವರ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಜೊತೆಗೆ ಬಸವ ಜಯಂತಿ ಅಂಗವಾಗಿ ಆಯೋಜಿಸಲಾದ ಬಸವತೊಟ್ಟಿಲು ಕಾರ್ಯಕ್ರಮದಲ್ಲಿ ಮಗುವಿಗೆ ನಾಮಕರಣ ನೆರವೇರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa