ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಎಂ.ಬಿ. ಪಾಟೀಲ
ವಿಜಯಪುರ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುತ್ತಿರುವ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ವಿವಿಧ ಭಾಗಗಳಿಂದ ಆಗಮಿಸಿದ ನಾಗರಿಕರು ತಮ್ಮ ವೈಯಕ್ತಿ
ಅಹವಾಲ


ವಿಜಯಪುರ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುತ್ತಿರುವ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ವಿವಿಧ ಭಾಗಗಳಿಂದ ಆಗಮಿಸಿದ ನಾಗರಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದ್ದು, ಸಚಿವರು ಅವುಗಳನ್ನು ಸಹಾನುಭೂತಿಯಿಂದ ಆಲಿಸಿದರು. ತಕ್ಷಣ ಸ್ಪಂದಿಸಿದ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕ ಸಾಧಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.

ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಬಂದ ಅಹವಾಲುಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, ಜನರ ಅಹವಾಲುಗಳಿಗೆ ಸ್ಪಂದಿಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು.

ಸಚಿವರ ಈ ಕಾರ್ಯಪದ್ಧತಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸರ್ಕಾರದ ಬದ್ಧತೆ ಮತ್ತೊಮ್ಮೆ ದೃಢಪಟ್ಟಂತಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande