
ನವದೆಹಲಿ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಸವ ಜಯಂತಿ ಅಂಗವಾಗಿ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರು ಜಗದ್ಗುರು ಬಸವೇಶ್ವರರಿಗೆ ಅವರಿಗೆ ಗೌರವ ನಮನ ಸಲ್ಲಿಸಿದರು.
ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಬಸವ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರ ಅಮರ ಬೋಧನೆಗಳಿಗೆ ವಂದನೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನ್ಯಾಯಸಮ್ಮತ ಮತ್ತು ಸಮಾನತೆಯ ಸಮಾಜ ನಿರ್ಮಾಣದ ಬಸವೇಶ್ವರರ ದೃಷ್ಟಿಕೋನ ನಮಗೆ ಸದಾ ಸ್ಫೂರ್ತಿ ನೀಡುತ್ತದೆ. ಜನರ ಸಬಲೀಕರಣಕ್ಕಾಗಿ ಅವರು ನಡೆಸಿದ ಅಚಲ ಹೋರಾಟ ಮತ್ತು ಸೇವಾಭಾವ ಇಂದಿಗೂ ಮಾರ್ಗದರ್ಶಕವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜಗದ್ಗುರು ಬಸವೇಶ್ವರರು 12ನೇ ಶತಮಾನದ ಶ್ರೇಷ್ಠ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾಗಿದ್ದರು. ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಜಾತಿ ವ್ಯವಸ್ಥೆಯನ್ನು ತಿರಸ್ಕರಿಸಿ, ಎಲ್ಲ ವರ್ಗದ ಜನರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅನುಭವ ಮಂಟಪವನ್ನು ಸ್ಥಾಪಿಸಿದ್ದರು.
“ಕಾಯಕವೇ ಕೈಲಾಸ” ಎಂಬ ತತ್ವದ ಮೂಲಕ ದುಡಿಮೆ ಮತ್ತು ಪ್ರಾಮಾಣಿಕ ಜೀವನದ ಮಹತ್ವವನ್ನು ಅವರು ಸಾರಿದರು. ಅವರನ್ನು ಲಿಂಗಾಯತ ಧರ್ಮದ ಸ್ಥಾಪಕರಾಗಿ ಕೂಡ ಸ್ಮರಿಸಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa