ದಕ್ಷಿಣ ಕೊರಿಯಾ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ
ನವದೆಹಲಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಪ್ರವಾಸದಲ್ಲಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರಿಗೆ ಸೋಮವಾರ ರಾಷ್ಟ್ರಪತಿ ಭವನ ಮುಂಭಾಗದ ಅಂಗಳದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು. ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ರೀ
Well come


ನವದೆಹಲಿ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ಪ್ರವಾಸದಲ್ಲಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರಿಗೆ ಸೋಮವಾರ ರಾಷ್ಟ್ರಪತಿ ಭವನ ಮುಂಭಾಗದ ಅಂಗಳದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು.

ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ರೀತಿಯಲ್ಲಿ ಬರಮಾಡಿಕೊಂಡರು. ಅಧ್ಯಕ್ಷರು ಏಪ್ರಿಲ್ 19ರಿಂದ 21ರವರೆಗೆ ಭಾರತ ಪ್ರವಾಸದಲ್ಲಿದ್ದಾರೆ.

ಅಧ್ಯಕ್ಷ ಮುರ್ಮು ತಮ್ಮ ಸಾಮಾಜಿಕ ಜಾಲತಾಣದ ಪ್ರಕಟಣೆಯಲ್ಲಿ, ದಕ್ಷಿಣ ಕೊರಿಯಾ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನದಲ್ಲಿ ಗೌರವಪೂರ್ವಕ ಸ್ವಾಗತ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ರಣಧೀರ್ ಜೈಸ್ವಾಲ್ ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ ವಿಶೇಷ ಕಾರ್ಯತಂತ್ರದ ಸಹಭಾಗಿತ್ವ ಮತ್ತಷ್ಟು ಬಲಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಅಧ್ಯಕ್ಷರು ರಾಜ್ ಘಾಟಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಶಾಂತಿ, ಸೌಹಾರ್ದತೆ ಮತ್ತು ಉತ್ತಮ ಜಗತ್ತಿನ ಆಶಯದೊಂದಿಗೆ ಅವರು ಗಾಂಧೀಜಿ ಸಮಾಧಿಗೆ ಪುಷ್ಪಾರ್ಚನೆ ಮಾಡಿದರು.

ಭಾರತ ಮತ್ತು ದಕ್ಷಿಣ ಕೊರಿಯಾ ನಡುವಿನ ವಿಶೇಷ ಕಾರ್ಯತಂತ್ರದ ಸಹಭಾಗಿತ್ವವು 2010ರಲ್ಲಿ ಆರಂಭವಾಗಿದೆ. ಇದರಡಿ ರಕ್ಷಣೆ, ವಾಣಿಜ್ಯ, ತಂತ್ರಜ್ಞಾನ, ಅರೆವಾಹಕಗಳು, ವಿದ್ಯುತ್ ಸಂಗ್ರಹ ಘಟಕಗಳು, ಜಾಲ ಭದ್ರತೆ ಹಾಗೂ ಹಿಂದೂ ಮಹಾಸಾಗರ–ಶಾಂತ ಮಹಾಸಾಗರ ವಲಯದಲ್ಲಿ ಸಹಕಾರ ವಿಸ್ತರಿಸಲಾಗುತ್ತಿದೆ.

ದಕ್ಷಿಣ ಕೊರಿಯಾ ಭಾರತದ ಪ್ರಮುಖ ವಾಣಿಜ್ಯ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವಾಣಿಜ್ಯವು 30 ಶತಕೋಟಿ ಡಾಲರ್ಗಿಂತ ಹೆಚ್ಚಾಗಿದೆ. ಈ ಭೇಟಿಯ ವೇಳೆ ವಾಣಿಜ್ಯ, ರಕ್ಷಣಾ ಸಹಕಾರ, ತಂತ್ರಜ್ಞಾನ ವಿನಿಮಯ ಹಾಗೂ ಹಿಂದೂ ಮಹಾಸಾಗರ–ಶಾಂತ ಮಹಾಸಾಗರ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆ ಕುರಿತ ಮಾತುಕತೆಗಳು ನಡೆಯುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande