

ಕೊಪ್ಪಳ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಆಚರಿಸಲಾಯಿತು.
ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಭರತ್ಕುಮಾರ, ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ತರಬೇತುದಾರರಾದ ಕಿರಣ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್