ಎ.ಕೆ.ಆರ್.ದೇವಿ ಪಿಯು ಕಾಲೇಜು ; ವಿಜ್ಞಾನ ವಿಭಾಗಕ್ಕೆ ಶೇ.100ಕ್ಕೆ 100ರಷ್ಟು, ರಾಜ್ಯಕ್ಕೆ 8ನೇ ಸ್ಥಾನ
ಶ್ರೀರಾಮನಗರ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ಪಿಯು ಫಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ.100ಕ್ಕೆ 100ರಷ್ಟು ಫಲಿತಾಂಶ ದೊರೆತಿದೆ. ವಾಣಿಜ್ಯ ವಿಭಾಗದಲ್ಲಿ ಶೇ.95 ವಿದ್ಯಾಥಿಗಳು ತ
eighth


eighth


ಶ್ರೀರಾಮನಗರ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ಪಿಯು ಫಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ.100ಕ್ಕೆ 100ರಷ್ಟು ಫಲಿತಾಂಶ ದೊರೆತಿದೆ. ವಾಣಿಜ್ಯ ವಿಭಾಗದಲ್ಲಿ ಶೇ.95 ವಿದ್ಯಾಥಿಗಳು ತೇರ್ಗಡೆಗೊಂಡಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಪಿಯು ಸೈನ್ಸ್ ನಲ್ಲಿ 203 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್: ಕಾಲೇಜಿನ ವಿಜ್ಞಾನ ವಿಭಾಗದ 203 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಅಲ್ಲದೇ 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸೈನ್ಸ್ ನಲ್ಲಿ ಕಾಲೇಜು ವಿದ್ಯಾರ್ಥಿ ರಾಜ್ಯಕ್ಕೆ 8ನೇ ರ್ಯಾಂಕ್, ಜಿಲ್ಲೆಗೆ ತೃತೀಯ ಸ್ಥಾನ: ಗ್ರಾಮೀಣ ಭಾಗದ ಕಾಲೇಜು ಕಳೆದo ಹಲವು ವರ್ಷಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಬಸವರಾಜ 591 (ಶೇ.98.50) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾನೆ. ಕಾರ್ತಿಕ್ ಎಚ್ ಎಂ 589 (98.17), ಅವಿನಾಶ್ 589 (98.17), ನಾಗೇಶ್ 586 (97.67) ಅಂಕಗಳನ್ನು ಗಳಿಸಿ ಸಾಧನೆ ತೋರಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಗಮನಾರ್ಹ ಸಾಧನೆ: ಕಾಲೇಜಿನ ವಾಣಿಜ್ಯ ವಿಭಾಗದ ವೀರನಗೌಡ 586 (97.67), ಗಂಗಾ ಜಿ, 584 (97.33) ಎಚ್.ಎಂ.ಸ್ಪೂರ್ತಿ 575 (95.83) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande