ಬಳ್ಳಾರಿಯಲ್ಲಿ ಭವ್ಯ ಅಶ್ವಾರೂಢ ಬಸವಣ್ಣನ ಪ್ರತಿಮೆ : ಶಾಸಕ ನಾರಾ ಭರತ್ ರೆಡ್ಡಿ
ಅಶ್ವಾರೂಢ
A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


A majestic statue of Basavanna on horseback in Bellary: MLA Nara Bharat Reddy


ಬಳ್ಳಾರಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಗರದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಶ್ವಾರೂಢ ಬಸವಣ್ಣನ ಪ್ರತಿಮೆಯನ್ನು ಅತ್ಯಂತ ಶೀಘ್ರದಲ್ಲಿಯೇ ಬಳ್ಳಾರಿಯಲ್ಲಿ ಅನಾವರಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಆಯೋಜಿಸಿದ್ದ ಮಹಾಮಾನವತವಾದಿ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ತಾಂತ್ರಿಕ ಕಾರಣಗಳಿಂದ ಪ್ರತಿಮೆ ಉದ್ಘಾಟನೆ ವಿಳಂಬವಾಗಿದ್ದು, ಮುಂದಿನ ಬಸವ ಜಯಂತಿಯವರೆಗೆ ಕಾಯದೇ, ಕೇವಲ ಆರು ತಿಂಗಳೊಳಗೆ ಶಾಸಕರ ಸ್ವಂತ ಖರ್ಚಿನಲ್ಲಿ ಭವ್ಯ ಅಶ್ವಾರೂಢ ಬಸವಣ್ಣನ ಪ್ರತಿಮೆಯನ್ನು ನಿರ್ಮಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಪ್ರತಿಮೆ ಸ್ಥಾಪನೆಗೆ ಬೇಕಾದ ಜಮೀನಿನ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಕ್ಯಾಬಿನೆಟ್ ಮಟ್ಟದಲ್ಲಿ ಆಗಬೇಕಾದ ಅನುಮತಿ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಶೀಘ್ರವಾಗಿ ಮುಗಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಭರತ್ ರೆಡ್ಡಿ ಹೇಳಿದರು.

ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಸವ ತತ್ವದ ಮೇಲೆ ನಡೆಯುತ್ತಿದ್ದು, ಈಗಾಗಲೇ ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ' ಎಂದು ಘೋಷಿಸಲಾಗಿದೆ. ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಅವರ ಭಾವಚಿತ್ರ ಇರಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಬಸವಣ್ಣನವರ ದಾಸೋಹ ತತ್ವದಿಂದ ಪ್ರೇರಿತರಾಗಿ ಸಿದ್ದರಾಮಯ್ಯನವರು 2013ರಲ್ಲೇ ‘ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತಂದಿದ್ದರು ಎಂದು ಅವರು ಶ್ಲಾಘಿಸಿದರು.

ಬಸವ ಜಯಂತಿಯ0ದೇ ಹೊಸಪೇಟೆಯಲ್ಲಿ ಶುಗರ್ ಪ್ಲಾಂಟ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ರೈತರಿಗೆ ಅನುಕೂಲವಾಗಲೆಂದು ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯಂತೆ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಬಸವಣ್ಣನವರು ಜಾತಿ-ಮತಗಳ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಲು ‘ಅನುಭವ ಮಂಟಪ' ಎಂಬ ಸಂಸತ್ತನ್ನು ಸ್ಥಾಪಿಸಿದರು. ಅವರ ವಚನ ಸಾಹಿತ್ಯವು ಇಂದಿಗೂ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂದಿನ ಕಾಲದಲ್ಲಿ ಸುಮಾರು ಅನೇಕ ಶರಣರನ್ನು ಒಗ್ಗೂಡಿಸಿ, ಸಮಾಜದ ಏಳಿಗೆಗಾಗಿ ಅವರು ಹಾಕಿಕೊಟ್ಟ ದಾರಿ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಶ್ಲಾಘಿಸಿದರು.

ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಬಸವಣ್ಣನವರು 800 ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಅಡಿಪಾಯ ಹಾಕಿದ್ದರು. ಅವರ ತತ್ವಗಳನ್ನು ಅನುಸರಿಸುವ ಮೂಲಕ ಭಾರತವನ್ನು ವಿಶ್ವಗುರುವಾಗಿ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಭಾರತದ ಸಂವಿಧಾನದ ಪೀಠಿಕೆಯಲ್ಲಿರುವ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದಂತಹ ಮೌಲ್ಯಗಳು ಬಸವಣ್ಣನವರ ವಚನಗಳಲ್ಲಿ ಮೊದಲೇ ಅಡಕವಾಗಿವೆ. ಬಸವಣ್ಣನವರು ತೋರಿಸಿದ ದಾರಿಯಲ್ಲಿ ನಡೆದು ನವ ಭಾರತ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು.

ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಅವರು ಮಾತನಾಡಿ, ಬಸವಣ್ಣನವರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ. ಕೆಲಸಕ್ಕಿಂತ ದೊಡ್ಡದು ಯಾವುದೂ ಇಲ್ಲ. ನಮ್ಮ ಕಾಯಕದಲ್ಲಿ ಆಸಕ್ತಿ ಮತ್ತು ಸಂಪೂರ್ಣವಾಗಿ ತೊಡಗಿಸಿಕೊಂಡರೆ, ಅದೇ ದೇವರನ್ನು ಕಾಣುವ ಹಾದಿಯಾಗುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ತಮ್ಮ ಕೆಲಸಗಳನ್ನು ನಿಷ್ಠೆ, ನಿಸ್ವಾರ್ಥ ಮತ್ತು ಕಾಳಜಿಯಿಂದ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು.

ಬಸವಣ್ಣನವರ ವಚನಗಳು ಕೇವಲ ನಾಲ್ಕು ಸಾಲುಗಳಿದ್ದರೂ, ಅವುಗಳಲ್ಲಿ ಬದುಕಿನ ಸತ್ಯ, ಪ್ರಾಮಾಣಿಕತೆ ಮತ್ತು ಜನರ ನಡುವಿನ ನಡವಳಿಕೆಯ ಬಗ್ಗೆ ಆಳವಾದ ಅರ್ಥವಿದೆ. ಬಸವಣ್ಣನವರ ತತ್ವದಂತೆ ನಮ್ಮ ದೇಹ ಮತ್ತು ಮನಸ್ಸನ್ನೇ ದೇಗುಲವಾಗಿಸಿಕೊಳ್ಳಬೇಕು. ಶ್ರದ್ಧೆಯಿಂದ ಕೆಲಸ ಮಾಡುವುದೇ ನಿಜವಾದ ಭಕ್ತಿ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಬಸವಣ್ಣನವರ ಸರಳತೆ ಅನುಕರಣೀಯವಾಗಿದ್ದು, ಜಾತಿ ಪದ್ಧತಿಯ ವಿರುದ್ಧದ ಅವರ ಹೋರಾಟ ಮತ್ತು ಸಮಾನತೆಯ ತತ್ವಗಳು ಇಂದಿನ ಸಂಕೀರ್ಣ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಬಸವಣ್ಣನವರ ವಚನಗಳನ್ನು ಮತ್ತು ಆದರ್ಶಗಳನ್ನು ಜೀವನದಲ್ಲಿ ಪಾಲಿಸುವುದರಿಂದ ಅನೇಕ ಜಟಿಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ತಿಪ್ಪೇರುದ್ರ ಸಂಡೂರು ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ವ್ಯಕ್ತಿಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುನ್ನ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಬಳ್ಳಾರಿಯ ರೇಖಾ.ಎಸ್.ವಿ ತಂಡ ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಭವ್ಯ ಮೆರವಣಿಗೆ :

ಜಯಂತಿ ಅಂಗವಾಗಿ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಶಾಸಕ ನಾರಾ ಭರತ್ ರೆಡ್ಡಿ ಅವರು ಚಾಲನೆ ನೀಡಿದರು. ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆಯ ಬ್ರೂಸ್ಪೇಟೆ ಪೊಲೀಸ್ ಠಾಣೆ ರಸ್ತೆ, ತೇರುಬೀದಿ, ಜೈನ್ ಮಾರ್ಕೆಟ್ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದವರೆಗೆ ಸಾಗಿ ಬಂದಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande