ಜಾತ್ರೋತ್ಸವ ವೇಳೆ ಬಾಲಕಾರ್ಮಿಕತೆ ವಿರುದ್ಧ ಜಾಗೃತಿ ಅಭಿಯಾನ
ಮಂಗಳೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಎನ್ಸಿಪಿಸಿಆರ್ ಪ್ಯಾನ್ ಇಂಡಿಯಾ ಅಭಿಯಾನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರೋತ್ಸವದ ವೇಳೆ ಮಕ್ಕಳನ್ನು ವ್ಯಾಪಾರ ಚಟುವಟಿಕೆಗಳಿಗೆ ಬಳಸುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆ ಕರ್ನಾಟಕ ರಾಜ್ಯ ಹಾಗೂ ಬಾಲ ಕಿಶೋರ್
Awareness


ಮಂಗಳೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಎನ್ಸಿಪಿಸಿಆರ್ ಪ್ಯಾನ್ ಇಂಡಿಯಾ ಅಭಿಯಾನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರೋತ್ಸವದ ವೇಳೆ ಮಕ್ಕಳನ್ನು ವ್ಯಾಪಾರ ಚಟುವಟಿಕೆಗಳಿಗೆ ಬಳಸುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆ ಕರ್ನಾಟಕ ರಾಜ್ಯ ಹಾಗೂ ಬಾಲ ಕಿಶೋರ್ ಕಾರ್ಮಿಕ ನಿರ್ಮೂಲನಾ ಸಂಸ್ಥೆ ಜಾಗೃತಿ ಅಭಿಯಾನ ನಡೆಸಿತು.

ಜಾತ್ರೋತ್ಸವದ ಸಂದರ್ಭದಲ್ಲಿ ಮಕ್ಕಳು ತಮ್ಮ ಹೆತ್ತವರ ಜೊತೆ ಬಲೂನ್, ಆಟಿಕೆ ಹಾಗೂ ಇತರ ವಸ್ತುಗಳನ್ನು ಮಾರಾಟ ಮಾಡಲು ಸಹಾಯ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದರಿಂದ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಈ ವೇಳೆ ಸಾರ್ವಜನಿಕರಿಗೆ ಬಾಲಕಾರ್ಮಿಕತೆ, ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಮಹತ್ವದ ಕುರಿತು ಕರಪತ್ರ ಮತ್ತು ಬಿತ್ತಿಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು. ಮಕ್ಕಳನ್ನು ಕೆಲಸಕ್ಕೆ ಬಳಸಬಾರದು, ಶಾಲಾ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪಾಲಕರಿಗೆ ಮನವರಿಕೆ ಮಾಡಿಕೊಡಲಾಯಿತು.

ಅಭಿಯಾನದಲ್ಲಿ ಭಾಗವಹಿಸಿದ ಅಧಿಕಾರಿಗಳು ಮಕ್ಕಳ ಭವಿಷ್ಯ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande