ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಮಲ, ಮೂತ್ರ ವಿಸರ್ಜನೆ ನಿಷೇಧ
ರಾಯಚೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ, ಮೂತ್ರ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪೌ
ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಮಲ, ಮೂತ್ರ ವಿಸರ್ಜನೆ ನಿಷೇಧ


ರಾಯಚೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ, ಮೂತ್ರ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರ ಪತ್ರದನ್ವಯ ಸ್ವಚ್ಚ ಭಾರತ್ ಮಿಷನ್ ಯೋಜನೆಗೆ ಸಂಬAಧಿಸಿದAತೆ ನೀಡಿರುವ ಮಾರ್ಗ ಸೂಚಿಗಳನ್ವಯ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡಗಳನ್ನು ಓ.ಡಿ.ಎಫ್ (ಬಯಲು ಶೌಚ ಮುಕ್ತ) ನಗರವೆಂದು ಘೋಷಿಸಿ ಪ್ರಮಾಣ ಪತ್ರ ಪಡೆಯಲಾಗಿದೆ. ಅದರಂತೆ ಓ.ಡಿ.ಎಫ್+ ಮರು ಪ್ರಮಾಣೀಕರಣ ಬಯಲು ಶೌಚ ಮುಕ್ತ ನಗರ ಎಂದು 35 ವಾರ್ಡಗಳನ್ನು ಘೋಷಿಸಲಾಗಿದೆ. ಪಾಲಿಕೆಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ, ಮೂತ್ರ ವಿಸರ್ಜನೆ ಮಾಡಬಾರದು.

ಮಾಡಿದಲ್ಲಿ ಮೂತ್ರ ವಿಸರ್ಜನೆಗೆ 500ರೂ. ಮತ್ತು ಮಲ ವಿಸರ್ಜನೆಗೆ 1000 ರೂ. ದಂಡ ವಿಧಿಸಲಾಗುವುದು. ಸಾರ್ವಜನಿಕರು, ಸಾರ್ವಜನಿಕ ಶೌಚಾಲಯಗಳು, ಹೋಟೆಲ್ ಮತ್ತು ಪೆಟ್ರೋಲ್ ಬಂಕ್ಗಳ ಶೌಚಾಲಯಗಳನ್ನು ಉಚಿತವಾಗಿ ಬಳಸಬಹುದಾಗಿದೆ.

ಈ ಬಗ್ಗೆ ಸಾರ್ವಜನಿಕರಿಂದ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳನ್ನು ಪ್ರಕಟಣೆ ಪ್ರಚುರ ಪಡಿಸಿದ 07 ದಿವಸಗಳೊಗಾಗಿ ಸೂಕ್ತ ದಾಖಲೆಗಳೊಂದಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande