ನಾಗರಿಕ ಸೇವಾ ಅಧಿಕಾರಿಗಳಿಗೆ ವಿಜಯೇಂದ್ರ ಶುಭಾಶಯ
ಬೆಂಗಳೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ನಾಗರಿಕ ಸೇವಾ ದಿನದ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯದ ಹಾಗೂ ದೇಶದ ಎಲ್ಲಾ ನಾಗರಿಕ ಸೇವಾ ಅಧಿಕಾರಿಗಳಿಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ಈ ಕುರಿತು ಎಕ್ಸನಲ್ಲಿ ಸಂದೇಶ ನೀಡಿರುವ ಅವರು, ರಾಷ್ಟ್ರದ ಅಭಿವೃದ್ಧಿ ಪ
Day


ಬೆಂಗಳೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ನಾಗರಿಕ ಸೇವಾ ದಿನದ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯದ ಹಾಗೂ ದೇಶದ ಎಲ್ಲಾ ನಾಗರಿಕ ಸೇವಾ ಅಧಿಕಾರಿಗಳಿಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ.

ಈ ಕುರಿತು ಎಕ್ಸನಲ್ಲಿ ಸಂದೇಶ ನೀಡಿರುವ ಅವರು, ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಉಕ್ಕಿನ ಚೌಕಟ್ಟಿನಂತಿರುವ ನಾಗರಿಕ ಸೇವಾ ಅಧಿಕಾರಿಗಳ ಸೇವೆ ಅಪಾರವಾಗಿದೆ ಎಂದು ಹೇಳಿದ್ದಾರೆ.

ಜನರ ಏಳಿಗೆಗಾಗಿ ಸರ್ಕಾರದ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವಲ್ಲಿ ನಾಗರಿಕ ಸೇವಾ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಜನಸೇವೆಯೇ ಜನಾರ್ದನ ಸೇವೆ’ ಎಂಬ ಧ್ಯೇಯದೊಂದಿಗೆ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ. ನವ ಕರ್ನಾಟಕ ಹಾಗೂ ವಿಕಸಿತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಅವರ ಸಾರ್ವಜನಿಕ ಸೇವೆ ಸದಾ ಜನಪರವಾಗಿ ಮುಂದುವರಿಯಲಿ ಎಂದು ವಿಜಯೇಂದ್ರ ಹಾರೈಸಿದ್ದಾರೆ.

ರಾಜ್ಯದ ಅಭಿವೃದ್ಧಿ, ಜನಕಲ್ಯಾಣ ಹಾಗೂ ಆಡಳಿತ ವ್ಯವಸ್ಥೆಯ ಸುಧಾರಣೆಯಲ್ಲಿ ನಾಗರಿಕ ಸೇವಾ ಅಧಿಕಾರಿಗಳ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande