ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಶಂಕುಸ್ಥಾಪನೆ
ಮೈಸೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿರಿಯಾಪಟ್ಟಣದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ವಿವಿಧ ಇಲಾಖೆಗಳ ಒಟ್ಟು 419.78 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ, ಶಕ್ತಿ ದೇವ
Cm


ಮೈಸೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿರಿಯಾಪಟ್ಟಣದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ವಿವಿಧ ಇಲಾಖೆಗಳ ಒಟ್ಟು 419.78 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ, ಶಕ್ತಿ ದೇವತೆ ಶ್ರೀಮಸಣಿಕಮ್ಮ ದೇವಸ್ಥಾನ ನಿರ್ಮಾಣ, ಕುವೆಂಪು ಭವನ ನಿರ್ಮಾಣ, ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಬೆಟ್ಟಕ್ಕೆ ಹೋಗುವ ರಸ್ತೆ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಶಾಸಕರಾದ ರವಿಶಂಕರ್, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್ ಹಾಗೂ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande