
ಬಳ್ಳಾರಿ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಾರತದಲ್ಲಿ ಮಹಿಳಾ ಶೇ. 33 ರಷ್ಟು ಮೀಸಲಾತಿ ಜಾರಿಗೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಇಂದಿರಾಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.
ಪ್ರತಿಭಟನೆಯ ನೇತೃತ್ವವಹಿಸಿದ್ದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಪೂರ್ವಭಾವಿ ಷರತ್ತುಗಳಿಲ್ಲದೆ ತಕ್ಷಣ ಜಾರಿಗೆ ತರಬೇಕು. 2026ರ ಜಾತಿ ಜನಗಣತಿಯ ನಿಖರ ದತ್ತಾಂಶದ ಆಧಾರದ ಮೇಲೆ ಕ್ಷೇತ್ರ ಮರುಹಂಚಿಕೆ ಮಾಡಬೇಕು ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಂ.ಎಸ್. ಮಂಜುಳಾ, ಮಾಬೂಸಾಬ್, ಎಲ್. ಮಾರೆಣ್ಣ, ಮಾನಯ್ಯ, ನಾಗು, ಬಿ. ರುದ್ರಪ್ಪ, ಯಶೋಧ, ಗೌಸಿಯ, ಆಶಾಲತಾ, ಸುನಿತ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್