ಆದಿ ಶಂಕರಾಚಾರ್ಯರ ಜಯಂತಿ ; ಡಿ.ಕೆ. ಶಿವಕುಮಾರ್ ನಮನ
ಬೆಂಗಳೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಆಧ್ಯಾತ್ಮಿಕ ಪರಂಪರೆಯ ಧ್ರುವತಾರೆ ಹಾಗೂ ಅದ್ವೈತ ಸಿದ್ಧಾಂತದ ಪ್ರತಿಪಾದಕರಾದ ಆದಿ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರ
ಜಯಂತಿ


ಬೆಂಗಳೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಆಧ್ಯಾತ್ಮಿಕ ಪರಂಪರೆಯ ಧ್ರುವತಾರೆ ಹಾಗೂ ಅದ್ವೈತ ಸಿದ್ಧಾಂತದ ಪ್ರತಿಪಾದಕರಾದ ಆದಿ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಉಪನಿಷತ್, ಬ್ರಹ್ಮಸೂತ್ರ ಹಾಗೂ ಭಗವದ್ಗೀತೆಗಳಿಗೆ ಭಾಷ್ಯ ಬರೆದ ಅಸಾಧಾರಣ ಮೇಧಾವಿ ಹಾಗೂ ದಾರ್ಶನಿಕರಾದ ಆದಿ ಶಂಕರಾಚಾರ್ಯರು ಭಾರತದ ನಾಲ್ಕು ದಿಕ್ಕುಗಳಲ್ಲಿ ಮಠಗಳನ್ನು ಸ್ಥಾಪಿಸಿ, ಸಾಂಸ್ಕೃತಿಕವಾಗಿ ಅಖಂಡ ಭಾರತವನ್ನು ಬೆಸೆದವರು ಎಂದು ಹೇಳಿದ್ದಾರೆ.

ಅದ್ವೈತ ತತ್ವದ ಮೂಲಕ ಭಾರತೀಯ ಚಿಂತನೆಗೆ ಹೊಸ ದಿಕ್ಕು ತೋರಿದ ಅವರು, ಆಧ್ಯಾತ್ಮಿಕತೆ, ಜ್ಞಾನ ಹಾಗೂ ಸಂಸ್ಕೃತಿಯ ಪ್ರತೀಕವಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಆದಿ ಶಂಕರಾಚಾರ್ಯರ ಜ್ಞಾನದ ಹಾದಿ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande