
ಬೆಂಗಳೂರು, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದೂ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹಾಗೂ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಜನರು ಉಷ್ಣ ಹಾಗೂ ಅಸ್ವಸ್ಥತೆಯನ್ನು ಅನುಭವಿಸುವ ಸಾಧ್ಯತೆಯಿದೆ.
ಇದಲ್ಲದೆ, ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ವಿಶೇಷವಾಗಿ ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಕೆಲವು ಪ್ರದೇಶಗಳಲ್ಲಿ ಹವಾಮಾನ ಏರುಪೇರು ಕಂಡುಬರುವ ಸಾಧ್ಯತೆ ಇದೆ.
ಜನರು ಬಿಸಿಲಿನ ತೀವ್ರತೆಯಿಂದ ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಮಳೆ, ಗುಡುಗು, ಸಿಡಿಲಿನ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa