ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ₹1.15 ಕೋಟಿ ಮೌಲ್ಯದ 3.29 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ
Seized


ಬೆಂಗಳೂರು, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ₹1.15 ಕೋಟಿ ಮೌಲ್ಯದ 3.29 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪರಿಶೀಲಿಸಿದಾಗ ಗಾಂಜಾವನ್ನು ಬಚ್ಚಿಟ್ಟಿರುವುದು ಪತ್ತೆಯಾಯಿತು. ಅಧಿಕಾರಿಗಳು ತಕ್ಷಣವೇ ಮಾದಕ ವಸ್ತುವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ 1985 ಅಡಿಯಲ್ಲಿ ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande