
ನವದೆಹಲಿ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ನಾಗರಿಕ ಸೇವಕರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣದತ್ತ ಕೆಲಸ ಮಾಡುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲು ನಾಗರಿಕ ಸೇವಾ ದಿನ ಒಂದು ಮಹತ್ವದ ಸಂದರ್ಭವಾಗಿದೆ ಎಂದು ಹೇಳಿದ್ದಾರೆ.
ತಳಮಟ್ಟದ ಆಡಳಿತದಿಂದ ಹಿಡಿದು ನೀತಿ ನಿರೂಪಣೆಯವರೆಗೆ ನಾಗರಿಕ ಸೇವಕರ ಪ್ರಯತ್ನಗಳು ಅಸಂಖ್ಯಾತ ಜನರ ಜೀವನವನ್ನು ಸ್ಪರ್ಶಿಸುತ್ತವೆ ಮತ್ತು ಭಾರತದ ಪ್ರಗತಿಗೆ ಮಹತ್ತರ ಕೊಡುಗೆ ನೀಡುತ್ತವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ನಾಗರಿಕ ಸೇವಕರು ಶ್ರೇಷ್ಠತೆ, ಸಹಾನುಭೂತಿ ಮತ್ತು ನಾವೀನ್ಯತೆಯನ್ನು ತಮ್ಮ ಕಾರ್ಯಗಳಲ್ಲಿ ಮುಂದುವರಿಸಿಕೊಂಡು, ಕರ್ತವ್ಯದ ಅತ್ಯುನ್ನತ ಗುಣಮಟ್ಟವನ್ನು ಎತ್ತಿಹಿಡಿಯಬೇಕು ಎಂದು ಅವರು ಆಶಿಸಿದ್ದಾರೆ.
ದೇಶದ ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯಲ್ಲಿ ನಾಗರಿಕ ಸೇವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ನಿಷ್ಠೆ ಮತ್ತು ಪರಿಶ್ರಮವೇ ಉತ್ತಮ ಆಡಳಿತದ ಮೂಲವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa