
ವಿಜಯಪುರ, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಕನಕದಾಸ ಬಡಾವಣೆಯ ನಿವಾಸಿಯಾಗಿರುವ ವಾರ್ತಾ ಇಲಾಖೆಯ ನಿವೃತ್ತ ಉನ್ನತ ಅಧಿಕಾರಿ ಮಲ್ಲಿಕಾರ್ಜುನ ಕೆಳಗಡೆ ಅವರು ತಮ್ಮ 75ನೇ ವಯಸ್ಸಿನಲ್ಲಿಯೂ ಪಾಲಿ ಭಾಷೆ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಪಾಲಿ ಭಾಷೆ ಕಲಿಯುವ ಆಸಕ್ತಿಯಿಂದ ಅವರು ಕಲಬುರಗಿಯ ಸಿದ್ದಾರ್ಥ ವಿಹಾರ ಟ್ರಸ್ಟ್ನ ಅಂತಾರಾಷ್ಟ್ರೀಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿಕೊಂಡು ಒಂದು ವರ್ಷದ ಡಿಪ್ಲೋಮಾ ಕೋರ್ಸ್ ಅಧ್ಯಯನ ಮಾಡಿದ್ದರು. ಬಳಿಕ ನಡೆದ ಪರೀಕ್ಷೆಯಲ್ಲಿ 500 ಅಂಕಗಳಿಗೆ 403 ಅಂಕಗಳನ್ನು ಗಳಿಸಿ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ.
ಈ ಸಾಧನೆಗಾಗಿ ಕರ್ನಾಟಕ ಸಂಸ್ಕೃತಿ ವಿಶ್ವವಿದ್ಯಾಲಯ ಅವರು ಪ್ರಮಾಣಪತ್ರ ನೀಡಿದೆ.
ಪಾಲಿ ಭಾಷೆಯ ಮಹತ್ವ:
ಪಾಲಿ ಭಾಷೆಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸಲಾಗಿದೆ ಮತ್ತು ಇದು ಬುದ್ಧನ ಬೋಧನೆಗಳನ್ನು (ತ್ರಿಪಿಟಕ) ಅರ್ಥಮಾಡಿಕೊಳ್ಳಲು ಅಗತ್ಯವಾಗಿದೆ.
ಮಲ್ಲಿಕಾರ್ಜುನ ಕೆಳಗಡೆ ಅವರ ಈ ವಿಶೇಷ ಸಾಧನೆಗೆ ಸ್ನೇಹಿತರ ಬಳಗ, ಕುಟುಂಬ ವರ್ಗ ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa