ಗುಡುಗು-ಸಿಡಿಲಿನ ಆರ್ಭಟ: ಮಸ್ಕಿ ತಾಲೂಕಿನಲ್ಲಿ ಭಾರೀ ಮಳೆ
ಬಳ್ಳಾರಿ, 21 ಏಪ್ರಿಲ್ (ಹಿ.ಸ.): ಆ್ಯಂಕರ್: ಮಸ್ಕಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆ ಸುರಿಯಿತು. ಮಳೆಯ ಪರಿಣಾಮ ವಾತಾವರಣ ತಂಪಾಗಿ, ಕಳೆದ ಕೆಲ ದಿನಗಳಿಂದ ಬಿಸಿಲು ಮತ್ತು ಬಿಸಿಗಾಳಿಯಿಂದ ಬಳಲುತ್ತಿದ್ದ ಜನತ
Rain


ಬಳ್ಳಾರಿ, 21 ಏಪ್ರಿಲ್ (ಹಿ.ಸ.):

ಆ್ಯಂಕರ್:

ಮಸ್ಕಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆ ಸುರಿಯಿತು. ಮಳೆಯ ಪರಿಣಾಮ ವಾತಾವರಣ ತಂಪಾಗಿ, ಕಳೆದ ಕೆಲ ದಿನಗಳಿಂದ ಬಿಸಿಲು ಮತ್ತು ಬಿಸಿಗಾಳಿಯಿಂದ ಬಳಲುತ್ತಿದ್ದ ಜನತೆಗೆ ನಿರಾಳತೆ ದೊರೆಯಿತು.

ಮಳೆಯೊಂದಿಗೆ ಭಾರೀ ಗಾಳಿ ಬೀಸಿದ ಪರಿಣಾಮ ಹಲವೆಡೆ ಗಿಡಮರಗಳ ಕೊಂಬೆಗಳು ಮುರಿದು ಬಿದ್ದವು. ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕೆಲಕಾಲ ವ್ಯತ್ಯಯಗೊಂಡಿದ್ದು, ಸಾರ್ವಜನಿಕರು ತೊಂದರೆ ಅನುಭವಿಸಿದರು. ಗುಡುಗು ಮತ್ತು ಸಿಡಿಲಿನ ಸದ್ದು ಹೆಚ್ಚಾಗಿ ಕೇಳಿಬಂದ ಕಾರಣ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಒಂದು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande