ಮಹಿಳಾ ಮೀಸಲಾತಿ ಮಸೂದೆ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ
ಬಳ್ಳಾರಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ಮಂಡಿಸಿದ್ದ ಶೇ. 33 ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದದ್ದನ್ನು ಖಂಡಿಸಿ ಜೆಡಿಎಸ್ ಪಕ್ಷದ ಮಹಿಳಾ ಘಟಕವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ. ಜೆಡಿಎಸ್
ಮಹಿಳಾ ಮೀಸಲಾತಿ ಮಸೂದೆ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ


ಮಹಿಳಾ ಮೀಸಲಾತಿ ಮಸೂದೆ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ


ಮಹಿಳಾ ಮೀಸಲಾತಿ ಮಸೂದೆ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕ ಪ್ರತಿಭಟನೆ


ಬಳ್ಳಾರಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ಮಂಡಿಸಿದ್ದ ಶೇ. 33 ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದದ್ದನ್ನು ಖಂಡಿಸಿ ಜೆಡಿಎಸ್ ಪಕ್ಷದ ಮಹಿಳಾ ಘಟಕವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪ ಜಮೀಲಾ ಶಬಾನ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಮಹಿಳೆಯರಿಗೆ ಶೇ. 33 ರಾಜಕೀಯ ಮೀಸಲಾತಿ ನೀಡುವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಮಹಿಳಾ ವಿರೋಧಿ ಧೋರಣೆ ತೋರಿದೆ ಎಂದು ಆರೋಪಿಸಿದರು.

ಜಿಲ್ಲಾ ಅಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, ಮಹಿಳಾ ರಾಜಕೀಯ ಮೀಸಲಾತಿಯ ಅಗತ್ಯವಿದೆ. ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿಯನ್ನು ಬೆಂಬಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಜಯ, ರೆಹಮತ್, ರಾಜೇಶ್ವರಿ, ಮಮತಾ, ಶಿವಗಂಗಾ, ಶಿರೀಷಾ, ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಕಂಪ್ಲಿ ಅಧ್ಯಕ್ಷ ಮೇಘರಾಜ್, ಶಿವು ನಾರಾಯಣ, ವಸಂತ್ ಕುಮಾರ್, ಮುತ್ತು, ಜಾವೀದ್, ಹೊನ್ನೂರು ಅಲಿ, ಹಾಗೂ ತಾಲ್ಲೂಕು ಮಹಿಳೆಯರು ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande