ಮೇ 23, 24 ರಂದು ಸಿಇಟಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ
ಕೊಪ್ಪಳ, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2026ರ (ಸಿಇಟಿ) ಪರೀಕ್ಷೆಗಳು ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ
ಮೇ 23, 24 ರಂದು ಸಿಇಟಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ


ಕೊಪ್ಪಳ, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2026ರ (ಸಿಇಟಿ) ಪರೀಕ್ಷೆಗಳು ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಸಿಇಟಿ ಪರೀಕ್ಷೆಗಳು ಏಪ್ರಿಲ್ 23 ಮತ್ತು 24 ರಂದು ಬೆಳಿಗ್ಗೆ 10.30 ರಿಂದ 11.50ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande