
ಕೊಪ್ಪಳ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ದೃಶ್ಯಕಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ (ಬಿ.ವಿ.ಎ.) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಗಳ ರಾಷ್ಟ್ರೀಯ ಶಿಕ್ಷಣ ಪದ್ಧತಿ' (STATE EDUCATION POLICY) ಯನ್ವಯ ದೃಶ್ಯ ಕಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿ.ಯು.ಸಿ.ಗೆ ಸಮಾನಾಂತರ ಕೋರ್ಸು ಮಾಡಿರುವ ಅಭ್ಯರ್ಥಿಗಳು ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ಪದವಿಯಲ್ಲಿ 3ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲು ವಿಳಾಸದ htts;//uucms.karnataka.gov.in ಅಥವಾ htts://www.cavamysore karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅಥವಾ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಸಂದರ್ಶನದ ದಿನಾಂಕದ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಹೆಚ್ಚಿ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ ಮೈಸೂರು ಸಂಸ್ಥೆಯ ಕಾರ್ಯಾಲಯದ ಸಹಾಯವಾಣಿ 0821-2438ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಡೀನ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್