ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಪರೋಕ್ಷ ತಿರುಗೇಟು
ಬೀದರ್, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಪರೋಕ್ಷವಾಗಿ ತಿರುಗೇಟುನೀಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ. ಬಸವಲಿಂಗ
VP


ಬೀದರ್, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಪರೋಕ್ಷವಾಗಿ ತಿರುಗೇಟುನೀಡಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ. ಬಸವಲಿಂಗ ಪಟ್ಟದೇವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ. ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು” ಎಂದು ಹೇಳಿದರು.

ಈ ಹೇಳಿಕೆ ಮೂಲಕ ಉಪರಾಷ್ಟ್ರಪತಿಗಳು, ಪ್ರಧಾನಿ ಮೋದಿ ವಿರುದ್ಧ ಖರ್ಗೆ ನೀಡಿದ್ದ ಟೀಕೆಗೆ ಪ್ರತಿಕ್ರಿಯೆ ನೀಡಿದಂತಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande