
ಕೊಪ್ಪಳ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ಪೌರಾಯುಕ್ತರ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆಯ ಪ್ರಭಾರಿ ಪೌರಾಯುಕ್ತರಾಗಿ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಮಲ್ಲಪ್ಪ ಗುಂಡೂರ್ ಅವರು ಅಧಿಕಾರ ಸ್ವೀಕಾರ ವಹಿಸಿಕೊಂಡಿದ್ದಾರೆ.
ಕೊಪ್ಪಳ ನಗರಸಭೆ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟಂತೆ ಯಾವುದೇ ಸರ್ಕಾರಿ, ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳು ಮತ್ತು ಇತರೆ ದಾಖಲೆಗಳನ್ನು ಮಂಜುನಾಥ ಮಲ್ಲಪ್ಪ ಗುಂಡೂರ್, ಕೆ.ಎಂ.ಎ.ಎಸ್., ಯೋಜನಾ ನಿರ್ದೇಶಕರು, ಕೊಪ್ಪಳ ನಗರಾಭಿವೃದ್ಧಿ ಕೋಶ ಕೊಪ್ಪಳ ಹಾಗೂ ಪೌರಾಯುಕ್ತರು, ನಗರಸಭೆ ಕಛೇರಿ, ಕೊಪ್ಪಳ-583231 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಕೊಪ್ಪಳ ನಗರಸಭೆಯ ಕಾರ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್