ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ
ತುಮಕೂರು, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಚಿವ ಜಿ. ಪರಮೇಶ್ವರ ಅವರು ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ಏಪ್ರಿಲ್ 24ರಿಂದ ಮೂರು ದಿನಗಳ ಕಾಲ ತುಮಕೂರಿನಲ್ಲಿ ನಡೆಯಲಿರುವ 24ನೇ ರಾಷ್ಟ್ರೀಯ ಕಿರಿಯರ 20 ವರ್ಷದೊಳಗಿನವರ ಅಥ್ಲೆಟಿಕ್ಸ್ ಫೆಡರೇಷನ್ ಕ್ರೀಡ
ಪರಮೇಶ್ವರ


ತುಮಕೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಚಿವ ಜಿ. ಪರಮೇಶ್ವರ ಅವರು ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ಏಪ್ರಿಲ್ 24ರಿಂದ ಮೂರು ದಿನಗಳ ಕಾಲ ತುಮಕೂರಿನಲ್ಲಿ ನಡೆಯಲಿರುವ 24ನೇ ರಾಷ್ಟ್ರೀಯ ಕಿರಿಯರ 20 ವರ್ಷದೊಳಗಿನವರ ಅಥ್ಲೆಟಿಕ್ಸ್ ಫೆಡರೇಷನ್ ಕ್ರೀಡಾಕೂಟದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯುತ್ತಿರುವುದು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಹೊಸದಾಗಿ ಅಭಿವೃದ್ಧಿಪಡಿಸಿರುವ ಮಹಾತ್ಮಗಾಂಧಿ ಕ್ರೀಡಾಂಗಣ ನಲ್ಲಿ ವಿಶ್ವದರ್ಜೆಯ ಸಿಂಥೆಟಿಕ್ ಟ್ರ್ಯಾಕ್ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆಗಳನ್ನು ರೂಪಿಸಲಾಗಿದ್ದು, ಇಂತಹ ಪ್ರತಿಷ್ಠಿತ ಕ್ರೀಡಾಕೂಟ ನಡೆಯುತ್ತಿರುವುದರಿಂದ ತುಮಕೂರು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಎಂದರು.

28 ರಾಜ್ಯಗಳಿಂದ ಸುಮಾರು 1500 ಬಾಲಕ ಮತ್ತು ಬಾಲಕಿಯರು ಭಾಗವಹಿಸಲಿದ್ದು, 40 ವಿವಿಧ ಸ್ಪರ್ಧೆಗಳಲ್ಲಿ ತಮ್ಮ ರಾಜ್ಯಗಳನ್ನು ಪ್ರತಿನಿಧಿಸಲಿದ್ದಾರೆ. ಜೆಎಸ್ಡಬ್ಲ್ಯೂ ಸ್ಪೋರ್ಟ್ಸ್ ಹಾಗೂ ರಿಲಾಯನ್ಸ್ ಫೌಂಡೇಶನ್ ತಂಡಗಳು ಕರ್ನಾಟಕದ ಬಲಿಷ್ಠ ತಂಡಗಳಾಗಿ ಪ್ರತ್ಯೇಕವಾಗಿ ಭಾಗವಹಿಸಲಿವೆ.

ಆಗಸ್ಟ್ 5ರಿಂದ 9ರವರೆಗೆ ಒರೆಗಾನ್ ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ಗೆ ಭಾರತದಿಂದ ತೆರಳುವ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಗೆ ಈ ಕ್ರೀಡಾಕೂಟ ಅತ್ಯಂತ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.

ತುಮಕೂರಿನಲ್ಲಿ ಇಂತಹ ಪ್ರತಿಷ್ಠಿತ ಕ್ರೀಡಾಕೂಟ ಆಯೋಜಿಸಲು ಅವಕಾಶ ನೀಡಿದ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಜಿಲ್ಲೆಯ ಯುವ ಪ್ರತಿಭೆಗಳಿಗೆ ಇದು ಸುವರ್ಣಾವಕಾಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಸತ್ಯನಾರಾಯಣ್ ಹಾಗೂ ಸಂಸ್ಥೆಯ ಪ್ರತಿನಿಧಿ ರಾಜು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande