ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ : ಸಚಿವ ಆರ್.ಬಿ. ತಿಮ್ಮಾಪುರ
ಬಾಗಲಕೋಟೆ, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಮತ್ತು ಸಮರ್ಪಕ ನಿರ್ವಹಣೆ ಕುರಿತಂತೆ ಇಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸುದೀರ್ಘ ಪರಿಶೀಲನಾ ಸಭೆ ನಡೆಸಿದ
Meeting


ಬಾಗಲಕೋಟೆ, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಮತ್ತು ಸಮರ್ಪಕ ನಿರ್ವಹಣೆ ಕುರಿತಂತೆ ಇಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸುದೀರ್ಘ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಸ್ತುತ ನೀರಿನ ಮಟ್ಟ, ಲಭ್ಯವಿರುವ ಮೂಲಗಳು ಹಾಗೂ ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೇಸಿಗೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಮೂಲಗಳ ಸಮರ್ಪಕ ನಿರ್ವಹಣೆ, ಟ್ಯಾಂಕರ್ ವ್ಯವಸ್ಥೆ, ಬೋರ್ವೆಲ್ಗಳ ಕಾರ್ಯಕ್ಷಮತೆ ಹಾಗೂ ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧವಾಗಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲೆಯ ಯಾವುದೇ ಹಳ್ಳಿಯಲ್ಲಿ ನೀರಿನ ಕೊರತೆ ತಲೆದೋರದಂತೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ್, ಸಿದ್ದು ಸವದಿ, ಜಗದೀಶ ಗುಡಗುಂಟಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande