
ಕೊಪ್ಪಳ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರೀ ಭಗವಾನ ಬುದ್ಧ ಮತ್ತು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಏಪ್ರಿಲ್ 24 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ವಹಿಸುವರು. ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರು ಈ ಸಭೆಯಲ್ಲಿ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್